ಬದಿಯಡ್ಕ : ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನದ ವಾರ್ಷಿಕ ಧನು ಸಂಕ್ರಮಣ ಉತ್ಸವವು ಡಿಸೆಂಬರ್ 16, 17ರಂದು ವಿವಿಧ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಜರುಗಲಿದೆ. ಮತ್ತು ಕಳೆದ ಮೇ ತಿಂಗಳಿನಲ್ಲಿ ಜರಗಿದ ಬ್ರಹ್ಮ ಕಲಶೋತ್ಸವದ ನೆನಪಿನ ಸ್ಮರಣ ಸಂಚಿಕೆ ಮತ್ತು ಶಾಶ್ವತ ನಾಮಫಲಕ ಅನಾವರಣ ಕಾರ್ಯಕ್ರಮ ಶ್ರೀ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ ಎಡನೀರು ಸಂಸ್ಥಾನಂ ಬಿಡುಗಡೆಗೊಳಿಸಲಿರುವರು.
ಇದರ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರದಲ್ಲಿ ಬಿಡುಗಡೆಗೊಳಿಸಲಾಯಿತು. ಶ್ರೀ ಕ್ಷೇತ್ರದ ಅರ್ಚಕರಾದ ಸೂರ್ಯನಾರಾಯಣ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಮೊಕೇಸರ ಜಗನ್ನಾಥ ರೈ ಪೆರಡಾಲ ಗುತ್ತು, ಸೀತಾರಾಮ ನವಕಾನ, ಸೇವಾ ಸಮಿತಿ ಪ್ರಧಾನ ಕಾರ್ಯದರ್ಶಿ ನಿರಂಜನ್ ರೈ ಪೆರಡಾಲ, ಜತೆ ಕಾರ್ಯದರ್ಶಿ ಭಾಸ್ಕರ ಪಂಜಿತಡ್ಕ, ಸೇವಾ ಸಮಿತಿ ಪದಾಧಿಕಾರಿಗಳು ಭಕ್ತರು ಉಪಸ್ಥಿತರಿದ್ದರು.



